ಬೆಂಗಳೂರು: ನಟಿ ಶಾನ್ವಿ ಶ್ರೀವಾಸ್ತವ್ ಅವರು ಕನ್ನಡದ ಅನೇಕ ಸಿನಿಮಾಗಳಲ್ಲಿ ಮಿಂಚಿ ಬಹುಭಾಷಾ ಚಿತ್ರಗಳಲ್ಲೂ ಬಿಸಿಯಾಗಿದ್ದಾರೆ. ಅಲ್ಲದೇ ಈ ಒತ್ತಡದ ನಡುವೆಯೂ ಅವರು ಪ್ರವಾಸಗಳನ್ನು ತಪ್ಪಿಸಿಕೊಳ್ಳುವುದಿಲ್ಲ.
ಇತ್ತೀಚಿಗಿನ ಪ್ರವಾಸದ ಸುಂದರ ಫೋಟೊವನ್ನು ಹಂಚಿಕೊಂಡಿರುವ ಅವರು ಅಭಿಮಾನಿಗಳ ಎದೆಯಲ್ಲಿ ಫುಳಕವನ್ನುಂಟು ಮಾಡಿದ್ದಾರೆ.
ಇದು ರಜೆಯ ಮಜಾ ಎಂದು ಹೇಳಿರುವ ಅವರು, ದಯವಿಟ್ಟು ಹೆಚ್ಚು ಬಿಕಿನಿ ಚಿತ್ರಗಳನ್ನು ಕೇಳಬೇಡಿ ಎಂದು ತಮಾಷೆಯಾಗಿ ಪೋಸ್ಟ್ ಹಾಕಿ ಕಿಚಾಯಿಸಿದ್ದಾರೆ.
ಪ್ರಸ್ತುತ ಶಾನ್ವಿ ‘ತ್ರಿಶೂಲಂ’ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಓಂ ಪ್ರಕಾಶ್ ರಾವ್ ನಿರ್ದೇಶನದ ಇದರಲ್ಲಿ ಉಪೇಂದ್ರ ಮತ್ತು ರವಿಚಂದ್ರನ್ ಮೊದಲ ಬಾರಿಗೆ ಒಟ್ಟಾಗಿ ನಟಿಸುತ್ತಿದ್ದಾರೆ.
ಇದು ತೆಲುಗಿನ ‘ಬಲುಪು’ ಚಿತ್ರದ ರಿಮೇಕ್. ರೊಮ್ಯಾಂಟಿಕ್ ಆ್ಯಕ್ಷನ್ ಚಿತ್ರ ಇದಾಗಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.