ಬೆಂಗಳೂರು: ಬಿಗ್‌ಬಾಸ್ ಕನ್ನಡ 10ನೇ ಸೀಸನ್‌ನಲ್ಲಿ ಡ್ರೋನ್ ಪ್ರತಾಪ್ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರೇ ಹೇಳಿಕೊಂಡಂತೆ ಅವರು ಇದನ್ನು ಕನಸು ಮನಸಿನಲ್ಲಿಯೂ ಎಣಿಸಿರಲಿಲ್ಲ.
ವರ್ತೂರು ಸಂತೋಷ್ ಮತ್ತು ವಿನಯ್ ಗೌಡ ಅವರು ಕ್ರಮವಾಗಿ ಮನೆಯಿಂದ ಹೊರಹೋಗುತ್ತಿದ್ದಂತೆಯೇ ಮನೆಯಲ್ಲಿ ಉಳಿದಿದ್ದವರು ಕಾರ್ತಿಕ್, ಸಂಗೀತಾ ಮತ್ತು ಪ್ರತಾಪ್. ಸ್ವತಃ ಕಿಚ್ಚ ಸುದೀಪ್ ಮನೆಯೊಳಗೆ ಹೋಗಿ, ಕಾಫಿ ಕುಡಿದು ಹರಟಿ ನಂತರ ಬಿಗ್‌ಬಾಸ್ ಮನೆಯಿಂದ ಬೀಳ್ಕೊಟ್ಟು ಮೂವರೂ ಸ್ಪರ್ಧಿಗಳನ್ನು ಮುಖ್ಯವೇದಿಕೆಗೆ ಕರೆತಂದರು.
ಮುಖ್ಯವೇದಿಕೆಯಲ್ಲಿ ಸಂಗೀತಾ ಶೃಂಗೇರಿ ಎರಡನೇ ರನ್ನರ್ ಅಪ್ ಆಗಿದ್ದಾರೆ ಎಂದು ಕಿಚ್ಚ ಘೋಷಿಸಿದರು. ನಂತರ ವೇದಿಕೆಯ ಮೇಲೆ ಉಳಿದಿದ್ದು ಕಾರ್ತಿಕ್ ಮತ್ತು ಡ್ರೋನ್ ಪ್ರತಾಪ್. ಕಿಚ್ಚನ ಒಂದು ಕೈಯಲ್ಲಿ ಕಾರ್ತಿಕ್ ಕೈ ಮತ್ತೊಂದು ಕೈಯಲ್ಲಿ ಪ್ರತಾಪ್ ಕೈ ಇತ್ತು. ಆ ಟೆನ್ಷನ್ ಅನ್ನು ಮಾತುಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಇಡೀ ಕರ್ನಾಟಕವೇ ಉಸಿರು ಬಿಗಿಹಿಡಿದು ಕಾಯುತ್ತಿದ್ದ ಗಳಿಗೆ ಅದು.
ಅದರಲ್ಲಿ ಸುದೀಪ್ ಅವರು ಕಾರ್ತಿಕ್ ಅವರ ಕೈಯನ್ನು ಎತ್ತಿ ಹಿಡಿದರು. ಅಂದರೆ ಡ್ರೋನ್ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರಿಗೆ ₹10 ಲಕ್ಷ ಬಹುಮಾನ ಪಡೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.