ಬೆಂಗಳೂರು: ಕೊರೊನಾ ಸೋಂಕು ತಡೆಗೆ ಸರ್ಕಾರ ರೂಪಿಸಿರುವ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದ ಸಂಘಟಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಕ್ರಮ ನಡೆದಿತ್ತು. 100 ಮಂದಿ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ, ಅದಕ್ಕಿಂತ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಸೇರಿದ್ದರು. ಹಲವರು ಮಾಸ್ಕ್ ಧರಿಸಿರಲಿಲ್ಲ. ಸಾಮಾಜಿಕ ಅಂತರವನ್ನೂ ಕಾಯ್ದುಕೊಂಡಿರಲಿಲ್ಲ.
ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ನ್ಯಾಯಾಲಯ ನೀಡುವ ನಿರ್ದೇಶನದಂತೆ ಕ್ರಮ ಕೈಗೊಳ್ಳಲಿದ್ದಾರೆ.
‘ಭಾನುವಾರ ರಾತ್ರಿ ಸರಿಗಮಪ ರಿಯಾಲಿಟಿ ಶೋನ ಫೈನಲ್ ಸುತ್ತು ನಡೆದಿತ್ತು. ಅದೇ ವೇಳೆಯೇ ನಿಯಮ ಉಲ್ಲಂಘನೆ ಮಾಡಲಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ' ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.