ಭೋಪಾಲ್:ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ (26) ಅವರು ಮಧ್ಯಪ್ರದೇಶದ ಇಂದೋರ್ನಲ್ಲಿರುವ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ವೈಶಾಲಿ ಅವರು ತಂದೆ ಮತ್ತು ಸಹೋದರನೊಂದಿಗೆ ಇಂದೋರ್‌ನಲ್ಲಿ ನೆಲೆಸಿದ್ದರು. ಘಟನಾ ಸ್ಥಳದಲ್ಲಿ ಡೆತ್ ನೋಟ್ ಕೂಡ ಸಿಕ್ಕಿದ್ದು, ಘಟನೆಗೆ ಸಂಬಂಧಿಸಿ ತೇಜಾಜಿ ನಗರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
‘ಸಸುರಾಲ್ ಸಿಮರ್ ಕಾ’ ಧಾರಾವಾಹಿ ಮೂಲಕ ಹಿಂದಿ ಕಿರುತೆರೆಗೆ ಕಾಲಿಟ್ಟ ವೈಶಾಲಿ, ಸಾಕಷ್ಟು ಖ್ಯಾತಿ ಗಳಿಸಿದ್ದರು. ‘ಸೂಪರ್ ಸಿಸ್ಟರ್ಸ್’, ‘ಮನಮೋಹಿನಿ 2’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು. ಇತ್ತೀಚೆಗೆ ‘ಯೇ ರಿಷ್ತಾ ಕ್ಯಾ ಕೆಹಲಾತಾ ಹೈ’, ‘ಯೇ ಹೈ ಆಶಿಕಿ’, ‘ರಕ್ಷಾ ಬಂಧನ್’ ಮುಂತಾದ ಧಾರಾವಾಹಿಗಳಲ್ಲಿ ವೈಶಾಲಿ ನಟಿಸಿದ್ದರು.
ವೈಶಾಲಿ ನಿಧನದಿಂದಾಗಿ ಕುಟುಂಬಸ್ಥರು ದುಃಖತಪ್ತರಾಗಿದ್ದಾರೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.