ಅಹಮದಾಬಾದ್: ಗುಜರಾತಿನ ಅಮೆಲಿ ಜಿಲ್ಲೆಯ ಗಿರ್ ಅರಣ್ಯ ಪ್ರದೇಶದಲ್ಲಿ ರಕ್ಷಿಸಲ್ಪಟ್ಟಿದ್ದ ಮೂರು ತಿಂಗಳ ಸಿಂಹದ ಮರಿಯು ಗುರುವಾರ ಸಂಜೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದರು.
ತಾಯಿಯಿಂದ ಬೇರ್ಪಟ್ಟಿದ್ದ ಈ ಗಂಡು ಮರಿಯನ್ನು ಬುಧವಾರ ಸಂಜೆ ವಾಂದಾ ಗ್ರಾಮದ ಶತ್ರುಂಜೀ ಅರಣ್ಯ ವಿಭಾಗದ ಸಿಬ್ಬಂದಿ ರಕ್ಷಿಸಿದ್ದರು. ಆಗಲೇ ಅಶಕ್ತವಾಗಿದ್ದ ಈ ಮರಿಯನ್ನು ರಕ್ಷಣಾ ಕೇಂದ್ರದಲ್ಲಿ ವೈದ್ಯರ ನಿಗಾದಲ್ಲಿ ಇಡಲಾಗಿತ್ತು. ಆದರೆ ಗುರುವಾರ ಬೆಳಿಗ್ಗೆ ಅದು ಮೃತಪಟ್ಟಿದೆ ಎಂದು ಅವರು ಮಾಹಿತಿ ನೀಡಿದರು.
ಗುಜರಾತಿನ ಗಿರ್ ಅರಣ್ಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 600ಕ್ಕೂ ಹೆಚ್ಚು ಸಿಂಹಗಳಿವೆ ಎಂದು ಅಂದಾಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.