ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ರೂಪುಗೊಂಡಿರುವ ಅತ್ಯಂತ ತೀವ್ರ ಸ್ವರೂಪದ ಚಂಡಮಾರುತ ‘ಬಿಪೊರ್‌ಜಾಯ್'ನ ಬಾಹ್ಯಾಕಾಶ ನೋಟವನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗಗನಯಾತ್ರಿ ಸುಲ್ತಾನ್ ಅಲ್ ನೆಯಾದಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಈ ಚಿತ್ರಗಳನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ತೆಗೆಯಲಾಗಿದೆ ಎಂದು ಅಲ್ ನೆಯಾದಿ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಫೊಟೊಗಳ ಜತೆಗೆ ಅವರು ವಿಡಿಯೊವನ್ನು ಹಂಚಿಕೊಂಡದ್ದಾರೆ.
ಸದ್ಯ ಗುಜರಾತ್‌ನಿಂದ ಕೇವಲ 200 ಕಿ.ಮೀ ದೂರದಲ್ಲಿರುವ ಬಿಪೊರ್‌ಜಾಯ್ ಇಂದು ಗುಜರಾತ್‌ಗೆ ಅಪ್ಪಳಿಸುವ ಸಾಧ್ಯತೆಗಳಿವೆ.
ಚಂಡಮಾರುತ ಬಿಪೊರ್‌ಜಾಯ್ ಪರಿಣಾಮವಾಗಿ ಗುಜರಾತ್‌ನ ಸೌರಾಷ್ಟ್ರ–ಕಛ್ ಪ್ರದೇಶದಲ್ಲಿ ಜೋರಾದ ಗಾಳಿ ಬೀಸುತ್ತಿದ್ದು, ಭಾರಿ ಮಳೆಯಾಗಿದೆ. ಕಛ್ ಜಿಲ್ಲೆಯ ಜಖೌ ಬಂದರು ಬಳಿ ಚಂಡಮಾರುತವು ಭೂಪ್ರದೇಶಕ್ಕೆ ಅಪ್ಪಳಿಸುವ ಹಿನ್ನೆಲೆಯಲ್ಲಿ ಕರಾವಳಿಯ 50 ಸಾವಿರ ಜನರನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.
‘ತೀವ್ರ ಸ್ವರೂಪದ ಚಂಡಮಾರುತ’ವಾಗಿ ಪರಿವರ್ತನೆಗೊಂಡಿರುವ ಬಿಪೊರ್‌ಜಾಯ್, ಗಂಟೆಗೆ 150 ಕಿ.ಮೀ. ವೇಗದಲ್ಲಿ ಮುನ್ನುಗ್ಗುತ್ತಿದೆ’ ಎಂದು ಹವಾಮಾನ ಇಲಾಖೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.