ಬೆಂಗಳೂರು: ಇಲ್ಲಿನ ಫೋರ್ಟಿಸ್ ಆಸ್ಪತ್ರೆಯು ಮ್ಯಾಕೋ ರೋಬೊ ಬಳಸಿಕೊಂಡು ಒಂದು ತಿಂಗಳಲ್ಲಿ 50 ಮಂದಿಗೆ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಿದೆ.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ಮೂಳೆ ಮತ್ತು ಜಂಟಿ ಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ನಾರಾಯಣ ಹುಲ್ಸೆ, ‘ಮ್ಯಾಕೋ ರೋಬೊ ನೆರವಿನಿಂದ ಆಫ್ರಿಕಾದ 66 ವರ್ಷದ ರೋಗಿಗೂ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮೊಣಕಾಲು ಅಥವಾ ಸೊಂಟ ಬದಲಿ ಶಸ್ತ್ರಚಿಕಿತ್ಸೆ ಗಣನೀಯವಾಗಿ ಸುಧಾರಿಸಿದೆ. ನೂತನ ಮ್ಯಾಕೋ ರೋಬೊ ತಂತ್ರಜ್ಞಾನವು ಮೂಳೆಗಳ ಜೋಡಣೆಯ ನಿಖರತೆಯನ್ನು ಸ್ವಷ್ಟಗೊಳಿಸಲಿದೆ. ವ್ಯಕ್ತಿ ವೇಗವಾಗಿ ಚೇತರಿಸಿಕೊಳ್ಳಲು ಈ ರೋಬೊಟಿಕ್ ತಂತ್ರಜ್ಞಾನ ಸಹಕಾರಿಯಾಗಿದೆ’ ಎಂದು ಹೇಳಿದರು.
ಫೋರ್ಟಿಸ್ ಆಸ್ಪತ್ರೆಯ ಬಿಸಿನೆಸ್ ಮುಖ್ಯಸ್ಥ ಅಕ್ಷಯ್ ಒಲೇಟಿ, ‘ಮ್ಯಾಕೋ ರೋಬೊ ಪರಿಚಯದಿಂದ ಶಸ್ತ್ರಚಿಕಿತ್ಸೆ ಸುಲಭವಾಗಿದೆ. ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನೂ ನಡೆಸಲಾಗುತ್ತಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.