ಗುಂಪೊಂದು ಮಹಿಳೆಯೊಬ್ಬರಿಗೆ ಹಿಂಸೆ ನೀಡಿ, ಗುಂಡಿಕ್ಕಿ ಹತ್ಯೆ ಮಾಡುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇದು ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ನಡೆದ ಘಟನೆ ಎಂದೂ ಹೇಳಲಾಗುತ್ತಿದೆ. ‘ಈ ಮಹಿಳೆಯು ಮಣಿಪುರದ ಹಿಂದೂ ಮೈತೇಯಿ ಸಮುದಾಯಕ್ಕೆ ಸೇರಿದವರು. ಹಿಂದೂಗಳು ಅಲ್ಪಸಂಖ್ಯಾತರಾದರೆ, ಇದೇ ಸ್ಥಿತಿ ಎದುರಾಗುತ್ತದೆ. ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಹಿಂಪdಡೆಯಲಾಗುತ್ತಿದೆ. ಕರ್ನಾಟಕದಲ್ಲೂ ಹಿಂದೂಗಳಿಗೆ ಇದೇ ಸ್ಥಿತಿ ಬರಲಿದೆ’ ಎಂಬ ವಿವರವನ್ನು ಈ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಆದರೆ ಇದು ಸುಳ್ಳು ಸುದ್ದಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.