ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ದೇಶದಲ್ಲಿ ಹೆಚ್ಚಾಗಿ ಬಳಸಲಾಗುತ್ತಿದೆ. ಡಿಜಿಟಲ್ ಪಾವತಿಯಲ್ಲಿ ಮುಂಚೂಣಿಯಲ್ಲಿರುವ ‘ಗೂಗಲ್ ಪೇ’ ಕುರಿತ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಅಡಿ ಗೂಗಲ್ ಪೇ ಅಧಿಕೃತ ಪಾವತಿ ವ್ಯವಸ್ಥೆ ಅಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಪ್ರಕಟಿಸಿದೆ’ ಎಂಬ ಸಂದೇಶಗಳು ಹರಿದಾಡುತ್ತಿವೆ. ಆದರೆ ಇದು ಸುಳ್ಳು ಮಾಹಿತಿ.
ಗೂಗಲ್ ಪೇ ಬಳಸಿ ಮಾಡಲಾಗುವ ಯಾವುದೇ ಹಣ ವರ್ಗಾವಣೆಯಲ್ಲಿ ತೊಂದರೆ ಉಂಟಾದಲ್ಲಿ ಅದಕ್ಕೆ ಪರಿಹಾರ ಸಿಗುವುದಿಲ್ಲ ಎಂಬ ಅರ್ಥದಲ್ಲಿ ಆಗುತ್ತಿರುವ ಚರ್ಚೆಗಳ ಬಗ್ಗೆ ಕೇಂದ್ರ ಸರ್ಕಾರದ ಪಿಐಬಿ ಸ್ಪಷ್ಟನೆ ನೀಡಿದೆ. ಗೂಗಲ್ ಪೇ ಬಳಸದಂತೆ ಆರ್‌ಬಿಐ ಯಾವುದೇ ಸೂಚನೆ ನೀಡಿಲ್ಲ. ಎನ್‌ಪಿಸಿಐ ಪ್ರಕಾರ, ಗೂಗಲ್ ಪೇ ಭಾರತದಲ್ಲಿ ಅಧಿಕೃತ ಪಾವತಿ ವ್ಯವಸ್ಥೆಯಾಗಿದೆ ಎಂದು ಫ್ಯಾಕ್ಟ್ ಚೆಕ್ ಪ್ರಕಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.