ಚೆನ್ನೈ (ಪಿಟಿಐ): ಪ್ರಧಾನಿ ಮೋದಿ ಅವರನ್ನು ಟೀಕಿಸಿರುವ ಆರೋಪದ ಮೇಲೆ ಐಐಟಿ–ಮದ್ರಾಸ್‌ನ ವಿದ್ಯಾರ್ಥಿ ಸಂಘದ ಮೇಲೆ ನಿಷೇಧ ಹೇರಿರುವ ಕ್ರಮವನ್ನು ಖಂಡಿಸಿ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್–ಪೆರಿಯಾರ್ ಸ್ಟಡಿ ಸರ್ಕಲ್ (ಎಪಿಎಸ್‌ಸಿ) ಮೇಲೆ ನಿಷೇಧ ಹೇರಿರುವ ಐಐಟಿಯ ಈ ಕ್ರಮವನ್ನು ವಿರೋಧಿಸಿರುವ ಡಿವೈಎಫ್‌ಐ ಮೋದಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಆರೋಪಿಸಿದೆ.
ಇಂದು ಐಐಟಿ ಕ್ಯಾಂಪಸ್ ಮುಂದೆ ಜಮಾಯಿಸಿದ್ದ ಡಿವೈಎಫ್‌ಐ ಕಾರ್ಯಕರ್ತರು ಕೇಂದ್ರ ಸರ್ಕಾರ ಮತ್ತು ಐಐಟಿಯ ಆಡಳಿತಾಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನಚಕಮಕಿ ನಡೆಯಿತು. ಪೊಲೀಸರು ವಿದ್ಯಾರ್ಥಿ ಮುಖಂಡರನ್ನು ಬಂಧಿಸಿ ಬಿಡುಗಡೆ ಮಾಡಿದರು.
ಈ ಪ್ರತಿಭಟನೆಗೆ ಡಿಎಂಕೆ ಮತ್ತು ಎಂಡಿಎಂಕೆ ಪಕ್ಷಗಳು ಬೆಂಬಲ ಸೂಚಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.