ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಠುವಾದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಇಬ್ಬರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಚಂಡೀಗಡದ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂದು ಆಗ್ರಹಿಸಿ ಬಾಲಕಿಯ ತಂದೆ ಸಲ್ಲಿಸಿದ ಅರ್ಜಿಯನ್ನು ವಿರೋಧಿಸಿ ಪ್ರಮುಖ ಆರೋಪಿಗಳಾದ ಸಾಂಜಿರಾಮ್ ಮತ್ತು ವಿಶಾಲ್ ಜಂಗೋತ್ರ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಸಂತ್ರಸ್ತೆಯ ಕುಟುಂಬಕ್ಕೆ ಮತ್ತು ವಕೀಲೆ ದೀಪಿಕಾ ಸಿಂಗ್ ರಜಾವತ್ ಅವರಿಗೆ ಭದ್ರತೆ ಒದಗಿಸಬೇಕೆಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಈಚೆಗೆ ಪೊಲೀಸರಿಗೆ ಆದೇಶಿಸಿತ್ತು. ರಾಜ್ಯ ಸರ್ಕಾರ ಅಭಿಪ್ರಾಯ ಮಂಡಿಸಿದ ಬಳಿಕ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.