ADVERTISEMENT

ಕುಟುಂಬದೊಂದಿಗೆ ಕೇಜ್ರಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2015, 9:20 IST
Last Updated 10 ಫೆಬ್ರುವರಿ 2015, 9:20 IST

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಮೋಘ ಗೆಲುವು ಕಂಡಿರುವ ಆಮ್‌ ಆದ್ಮಿ ಪಾರ್ಟಿಯ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಅವರು ಕುಟುಂಬ ಸದಸ್ಯರ ಜತೆಗೆ ಸಂಭ್ರಮ ಹಂಚಿಕೊಂಡಿದ್ದಾರೆ.

ಕುಟುಂಬ ಸದಸ್ಯರ ಜತೆಗೆ ಗೆಲುವಿನ ಸಂಭ್ರಮದಲ್ಲಿ ಭಾಗಿಯಾಗಿರುವ ಚಿತ್ರಗಳನ್ನು ಟ್ವೀಟ್‌ ಮಾಡಿರುವ ಕೇಜ್ರಿವಾಲ್‌, ‘ಸದಾ ಜತೆಗಿರುವ ಸುನಿತಾಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.

ಕುಟುಂಬದೊಂದಿಗೆ ಸಿಹಿ ಹಂಚಿಕೊಂಡ ಹಾಗೂ ಪತ್ನಿ ಸುನೀತಾ ಅವರನ್ನು ಅಪ್ಪಿಕೊಂಡಿರುವ ಚಿತ್ರಗಳನ್ನು ಟ್ವೀಟ್‌ ಮಾಡಿದ್ದಾರೆ. ‘ಗೆಲುವಿನ ನಂತರದ ಪ್ರಥಮ ಚಿತ್ರಗಳು’ ಎಂದು ಕರೆಯಲಾಗಿರುವ ಈ ಚಿತ್ರಗಳನ್ನು 3,266 ಮಂದಿ ರಿಟ್ವೀಟ್‌ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.