ಲಖನೌ: ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲುವಿನ ಹೊಸ್ತಿಲಲ್ಲಿ ಇರುವಾಗಲೇ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಚರ್ಚೆಗಳು ಗರಿಗೆದರಿವೆ.
ಬಲ್ಲ ಮೂಲಗಳ ಪ್ರಕಾರ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಉಮಾಭಾರತಿ ಹಾಗೂ ಉತ್ತರಪ್ರದೇಶದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೇಶವ್ ಮೌರ್ಯ ಮುಖ್ಯಂತ್ರಿಗಳ ರೇಸ್‌ನಲ್ಲಿ ಇದ್ದಾರೆ.
2000ನೇ ವರ್ಷದಲ್ಲಿ ರಾಜನಾಥ್ ಸಿಂಗ್ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಹಿರಿಯ ರಾಜಕಾರಣಿಯಾಗಿರುವ ರಾಜನಾಥ್ ಸಿಂಗ್ ಉತ್ತರಪ್ರದೇಶ ಬಿಜೆಪಿಯಲ್ಲಿ ಉತ್ತಮ ಹಿಡಿತ ಸಾಧಿಸಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಚುನಾವಣೆಯಲ್ಲಿ ಬಿಜೆಪಿಯ ಉತ್ತಮ ಸಾಧನೆಗೆ ರಾಜ್ಯ ಘಟಕದ ಅಧ್ಯಕ್ಷ ಕೇಶವ್ ಮೌರ್ಯ ಅವರ ಕೊಡುಗೆಯು ಇರುವುದರಿಂದ ಅಂತಿಮವಾಗಿ ಹೈಕಮಾಂಡ್ ಕೇಶವ್ ಮೌರ್ಯ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಪರಿಣಿಸುವ ಸಾಧ್ಯತೆಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.