ಗೋರಖಪುರ: ಗೋರಖಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಆಗಸ್ಟ್ ತಿಂಗಳಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ 296 ಎಂದು ಕಾಲೇಜಿನ ಪ್ರಾಂಶುಪಾಲ ಪಿ.ಕೆ. ಸಿಂಗ್ ಬುಧವಾರ ತಿಳಿಸಿದ್ದಾರೆ.
213 ಮಕ್ಕಳು ಎನ್‌ಐಸಿಯುನಲ್ಲಿ ಮತ್ತು 83 ಮಕ್ಕಳು ಎನ್ಸೆಫಾಲಿಟೀಸ್ ವಾರ್ಡ್‌ನಲ್ಲಿ ಮೃತಪಟ್ಟಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.
ಜನವರಿಯಲ್ಲಿ 152, ಫೆಬ್ರುವರಿಯಲ್ಲಿ 122, ಮಾರ್ಚ್‌ನಲ್ಲಿ 159, ಏಪ್ರಿಲ್‌ನಲ್ಲಿ 123, ಮೇನಲ್ಲಿ 139, ಜೂನ್ 137 ಮತ್ತು ಜುಲೈನಲ್ಲಿ 128 ಮಕ್ಕಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಸಿಂಗ್ ತಿಳಿಸಿದ್ದಾರೆ.
‘ಆರೋಗ್ಯ ಸ್ಥಿತಿ ತೀರಾ ಹದಗೆಟ್ಟ ಮೇಲೆ ಪೋಷಕರು ಮಕ್ಕಳನ್ನು ಆಸ್ಪತ್ರೆಗೆ ಕರೆತರುತ್ತಾರೆ. ಆದರೆ, ಸಮಸ್ಯೆಯ ಆರಂಭದಲ್ಲೇ ಆಸ್ಪತ್ರೆಗೆ ಮಕ್ಕಳನ್ನು ಕರೆದುಕೊಂಡು ಬಂದರೆ ಸಾಕಷ್ಟು ಜೀವಗಳನ್ನು ಉಳಿಸಬಹುದು’ ಎಂದು ಸಿಂಗ್ ಹೇಳಿದ್ದಾರೆ.
‘ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಲ್ಲಿ ಎನ್ಸೆಫಾಲಿಟೀಸ್ ಸಮಸ್ಯೆಯಿದ್ದ 17 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಇಬ್ಬರು ಮಕ್ಕಳು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ’ ಎಂದು ಆರೋಗ್ಯ ಇಲಾಖೆಯ ಗೋರಖಪುರದ ಹೆಚ್ಚುವರಿ ನಿರ್ದೇಶಕ ಡಾ. ಪುಷ್ಕರ್ ಆನಂದ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.