ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಪಿಡಿಪಿ- ಬಿಜೆಪಿ ಮೈತ್ರಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅಲ್ಲಿನ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಮಧ್ಯಾಹ್ನ ರಾಜ್ಯಪಾಲ ಎನ್. ಎನ್. ವ್ಹೋರಾ ಅವರಿಗೆ ಮುಫ್ತಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಕಾಶ್ಮೀರದಲ್ಲಿ ಶಾಂತಿ ಕಾಪಾಡಲು ಮತ್ತು ಜಮ್ಮು ಕಾಶ್ಮೀರದ ಕ್ಷಿಪ್ರ ಅಭಿವೃದ್ಧಿಗಾಗಿ ನಾವು ಪಿಡಿಪಿಯೊಂದಿಗೆ ಕೈಜೋಡಿಸಿ ಸರ್ಕಾರ ರಚಿಸಿದ್ದೆವು. ಆದರೆ ಇನ್ನು ಮುಂದೆ ನಾವು ಜಮ್ಮು ಕಾಶ್ಮೀರದಲ್ಲಿ ಪಿಡಿಪಿಯೊಂದಿಗೆ ಮೈತ್ರಿ ಮುಂದುವರಿಸುವುದಿಲ್ಲ. ನಾವು ಮೈತ್ರಿ ಸರ್ಕಾರದಿಂದ ಹೊರಬರುವ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
[related]
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.