ಮುಂಬೈ (ಪಿಟಿಐ): ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಮನೆ ಮತ್ತು ಕಚೇರಿ ಮೇಲೆ ಮಂಗಳವಾರ ಸಿಬಿಐ ದಾಳಿ ನಡೆಸಿದೆ.
ಸ್ವಯಂ ಸೇವಾ ಸಂಸ್ಥೆಯೊಂದನ್ನು ನಡೆಸುತ್ತಿರುವ ತೀಸ್ತಾ ಅವರು ವಿದೇಶಗಳಿಂದ ಅಕ್ರಮವಾಗಿ ದೇಣಿಗೆ ಸಂಗ್ರಹಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ಮನೆ ಮತ್ತು ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಲೆಕ್ಕಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳ ಎರಡು ತಂಡ ಕಚೇರಿ ಮತ್ತು ಮನೆ ಮೇಲೆ ಪ್ರತ್ಯೇಕವಾಗಿ ದಾಳಿ ನಡೆಸಿದೆ.
ಈ ದಾಳಿಯನ್ನು ನಿರೀಕ್ಷಿಸಿರಲಿಲ್ಲ, ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ಸಿಬಿಐ ಅಧಿಕಾರಿಗಳಿಗೆ ಪತ್ರ ಬರೆದಿದ್ದೆ ಆದರೂ ದಾಳಿ ಮಾಡಲಾಗಿದೆ ಎಂದು ತೀಸ್ತಾ ಮಾಧ್ಯಮಗಳ ಎದುರು ಬೇಸರ ವ್ಯಕ್ತಪಡಿಸಿದ್ದಾರೆ.
ಇದು ಭಾರತೀಯ ಜನತಾ ಪಕ್ಷದ ಪಿತೂರಿ ಎಂದು ಅವರು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.