ಬೆಂಗಳೂರು: ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರ ಮೇಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ವಿಧಿಸಿದ್ದ ನಿರ್ಬಂಧವನ್ನು ರಾಜ್ಯ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ.
ಪ್ರಚೋದನಕಾರಿ ಭಾಷಣ ಮಾಡುವ ಆರೋಪದಡಿ, ಫೆಬ್ರುವರಿ 5ರಿಂದ 10ವರೆಗೂ ಬೆಂಗಳೂರು ಪ್ರವೇಶಿಸದಂತೆ ತೊಗಾಡಿಯಾ ಅವರ ಮೇಲೆ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ಆದೇಶಿಸಿದ್ದರು.
ಈ ಕ್ರಮವನ್ನು ಪ್ರಶ್ನಿಸಿ ತೊಗಾಡಿಯಾ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.
ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಫೆಬ್ರುವರಿ 8ರಂದು ನಡೆಯಲಿರುವ ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ತೊಗಾಡಿಯಾ ಅವರು ಪಾಲ್ಗೊಳ್ಳುವ ಕಾರ್ಯಕ್ರಮ ನಿಗದಿಯಾಗಿತ್ತು.
ಪ್ರಚೋದನಕಾರಿ ಭಾಷಣಗಳ ಮೂಲಕ ಕೋಮು ಸಾಮರಸ್ಯ ಕದಡಬಲ್ಲ ಅಪಾಯಕಾರಿ ವ್ಯಕ್ತಿ ತೊಗಾಡಿಯಾ ಎಂದು ಅಡ್ವೊಕೇಟ್ ಜನರಲ್ ರವಿವರ್ಮಾ ಕುಮಾರ್ ಅವರು ಗುರುವಾರ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.