ನವದೆಹಲಿ (ಪಿಟಿಐ): ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಿದ್ಯಾರ್ಹತೆ ಮತ್ತು ಕೆಲವು ಮಾನದಂಡಗಳನ್ನು ಹೊಂದಿರಬೇಕು ಎಂದು ಹರಿಯಾಣ ಸರ್ಕಾರ ಜಾರಿ ಮಾಡಲು ಉದ್ದೇಶಿಸಿದ್ದ ನೂತನ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಹರಿಯಾಣ ಸರ್ಕಾರ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತಂದು ಕನಿಷ್ಠ ವಿದ್ಯಾರ್ಹತೆ ಮತ್ತು ಕೆಲವು ಮಾನದಂಡಗಳನ್ನು ನಿಗದಿಪಡಿಸಿತ್ತು.
ಚುನಾವಣೆಗೆ ಸ್ಪರ್ಧಿಸುವವರು ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, ಅವರು ವಿದ್ಯುತ್ ಬಿಲ್, ಕಂದಾಯ ಬಿಲ್‌ಗಳನ್ನು ಪಾವತಿಸಿರಬೇಕು ಹಾಗೂ ಅಪರಾಧ ಹಿನ್ನೆಲೆಯನ್ನು ಹೊಂದಿರಬಾರದು ಎಂಬ ಹಲವು ಮಾನದಂಡಗಳನ್ನು ನಿಗದಿಪಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಕೆಲವರು ಸುಪ್ರಿಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸುವ ಮೂಲಕ ಹರಿಯಾಣ ಸರಕಾರದ ಕ್ರಮವನ್ನು ಎತ್ತಿ ಹಿಡಿಯಿತು. ಇನ್ನು ಮುಂದೆ ದೇಶದ ಎಲ್ಲ ಪಂಚಾಯತ್ ಚುನಾವಣೆಗಳಿಗೂ ವಿದ್ಯಾರ್ಹತೆ ಮತ್ತು ಮಾನದಂಡಗಳು ಅನ್ವಯವಾಗಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.