ನವದೆಹಲಿ(ಪಿಟಿಐ): ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದಿರುವ ಕೇಂದ್ರ ಬಿಜೆಪಿ ಸರ್ಕಾರ ಕೊನೆಗೂ ವಿವಾದಿತ ಭೂಸ್ವಾಧೀನ ಮಸೂದೆಗೆ ಅಗತ್ಯ ತಿದ್ದುಪಡಿಗಳನ್ನು ಮಾಡುವುದಾಗಿ ಮಂಗಳವಾರ ಲೋಕಸಭೆಗೆ ತಿಳಿಸಿತು.
ರೈತರು ಮತ್ತು ಕೃಷಿ ವಲಯದ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ರಾಜಕೀಯ ಮುಖಂಡರು, ರೈತ ಸಂಘಟನೆಗಳು ಹಾಗೂ ಕೃಷಿ ಸಂಬಂಧಿತ ಸಂಘ-ಸಂಸ್ಥೆಗಳ ಸಲಹೆಗಳನ್ನು ಪರಿಗಣಿಸಿ ಅಗತ್ಯ ಬದಲಾವಣೆ ಮಾಡಲಾಗುವುದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಚೌಧರಿ ಬಿರೇಂದ್ರರ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.
‘ಕೈಗಾರಿಕಾ ಕಾರಿಡಾರ್ ಯೋಜನೆ’ಗಳಿಗೆ ಭೂ ಸ್ವಾಧೀನ ಮಿತಿಗೊಳಿಸುವುದು ಸೇರಿದಂತೆ ವಿವಿಧ ಒಂಬತ್ತು ಮಸೂದೆಗಳಲ್ಲಿನ ತಿದ್ದುಪಡಿ ಪ್ರಸ್ತಾವಗಳನ್ನು ಸರ್ಕಾರ ಪರಿಗಣಿಸಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.