ಶ್ರೀಹರಿಕೋಟಾ: ಜಿಸ್ಯಾಟ್–19 ಉಪಗ್ರಹವನ್ನು ಹೊತ್ತ ಭಾರತದ ಅತ್ಯಂತ ದೈತ್ಯ ರಾಕೆಟ್ ಜಿಎಸ್‌ಎಲ್‌ವಿ ಮಾರ್ಕ್ 3 ಸೋಮವಾರ ಸಂಜೆ ಬಾಹ್ಯಾಕಾಶಕ್ಕೆ ಚಿಮ್ಮಿದೆ. ಉಡಾವಣೆಗೊಂಡ 21 ನಿಮಿಷಗಳಲ್ಲಿ ಉಪಗ್ರಹ ಯಶಸ್ವಿಯಾಗಿ ಕಕ್ಷೆ ಸೇರಿದೆ.
ಭಾರಿ ವೇಗದ ಮತ್ತು ಉಪಗ್ರಹ ಆಧರಿತ ಅಂತರ್ಜಾಲ ಸಂಪರ್ಕ ಸೇವೆಗೆ ಈ ಉಪಗ್ರಹ ನೆರವಾಗಲಿದೆ.
640 ಟನ್ ತೂಕ ಮತ್ತು 42.23 ಮೀಟರ್ ಉದ್ದದ ಜಿಎಸ್‌ಎಲ್‌ವಿ ಮಾರ್ಕ್ 3 ಉಡಾವಣಾ ವಾಹಕವು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.