ನವದೆಹಲಿ (ಐಎಎನ್‌ಎಸ್): ಕೋಮುವಾದ ಮತ್ತು ಬಹುತ್ವದ ಮೇಲಿನ ದಾಳಿ ವಿರೋಧಿಸಿ ಸಾಹಿತಿಗಳು ನವದೆಹಲಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.
ಮಂಡಿ ಹೌಸ್ ಸಮೀಪದ ಶ್ರೀರಾಮ್ ಸೆಂಟರ್‌ನಲ್ಲಿ ಸೇರಿದ ಸಾಹಿತಿಗಳು ಸಾಹಿತ್ಯ ಅಕಾಡೆಮಿಯ ಕೇಂದ್ರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಬಂದಿದ್ದ ನೂರಕ್ಕೂ ಹೆಚ್ಚು ಮಂದಿ ಹಿರಿ ಕಿರಿಯ ಲೇಖಕರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೆರವಣಿಗೆ ನಡೆಸಿದ್ದಾರೆ.
‘ದೇಶದಲ್ಲಿ ಅಲ್ಪಸಂಖ್ಯಾತರು, ದಲಿತರು ಅಭದ್ರತೆಯಿಂದ ಬದುಕುವಂತಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸಾಹಿತಿಗಳು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.