ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮಹಿಳೆಯರು ನಿಂತಿರುವ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ತನಿಖೆಗೆ ಕೇರಳ ಸರ್ಕಾರ ಆದೇಶಿಸಿದೆ.
ಭಕ್ತಾದಿಗಳು ಅಯ್ಯಪ್ಪ ಸ್ವಾಮಿಯನ್ನು ನಿರಂತರ ಬ್ರಹ್ಮಚಾರಿ ಎಂದು ಪರಿಗಣಿಸಿದ್ದು, ಗುಡ್ಡದ ಮೇಲಿನ ಅಯ್ಯಪ್ಪ ಮಂದಿರಕ್ಕೆ 10–50 ವರ್ಷ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ನಿಷೇಧವಿದೆ.
ದೇವಸ್ವೊಂ(ದೇವಾಲಯದ ಸ್ವತ್ತುಗಳಿಗೆ ಸಂಬಂಧಿಸಿದ) ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರು ದೇವಸ್ವೊಂ ಕಾವಲು ಪಡೆಗೆ ತನಿಖೆ ನಡೆಸಿ ಫೋಟೋದ ಸತ್ಯಾಸತ್ಯೆತೆ ಕುರಿತು ವರದಿ ನೀಡುವಂತೆ ಸೂಚಿಸಿದ್ದಾರೆ.
ಕೊಲ್ಲಂ ಮೂಲದ ಉದ್ಯಮಿಯೊಬ್ಬರು ವಿಶೇಷ ದರ್ಶನಕ್ಕೆ ಆಗಮಿಸಿದ್ದು, ಅವರೊಂದಿಗೆ ಕೆಲ ಮಹಿಳೆಯರು ದೇವಸ್ಥಾನ ಪ್ರವೇಶಿಸಿರುವ ಕುರಿತು ದೂರು ಬಂದಿರುವುದಾಗಿ ಸಚಿವರು ತಿಳಿಸಿದ್ದಾರೆ.
ಹೀಗಾಗಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಫೋಟೋ ಕುರಿತು ತನಿಖೆ ನಡೆಸುವಂತೆ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.