ನವದೆಹಲಿ: ಹಿರಿಯ ಲೇಖಕಿ ಮತ್ತು ಕೇಂದ್ರದ ಮಾಜಿ ಸಚಿವೆ ಡಾ. ಸರೋಜಿನಿ ಮಹಿಷಿ (88) ಅವರು ಭಾನುವಾರ ಬೆಳಗಿನ ಜಾವ ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಿಧನರಾದರು.
ಘಾಜಿಯಾಬಾದಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು ಅವಿವಾಹಿ-ತರಾಗಿದ್ದರು. ಅಂತ್ಯ ಸಂಸ್ಕಾರ ಎಲ್ಲಿ ನಡೆಸಬೇಕು ಎಂದು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಮೃತರ ಸಹೋದರ ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಪ್ರಹ್ಲಾದ್ ಬಿ. ಮಹಿಷಿ ತಿಳಿಸಿದ್ದಾರೆ.
ಕನ್ನಡದಲ್ಲಿ ಕವಿತೆಗಳನ್ನು ಬರೆದಿರುವ ಸರೋಜಿನಿ ಹಿಂದಿ ಭಾಷೆ ಮೇಲೂ ಪ್ರಭುತ್ವ ಹೊಂದಿದ್ದರು. ಕೇಂದ್ರದಲ್ಲಿ ಮಂತ್ರಿಯಾಗಿದ್ದ ಮಹಿಷಿ 4 ಸಲ ಲೋಕಸಭೆ, 2 ಅವಧಿಗೆ ರಾಜ್ಯಸಭೆ ಸದಸ್ಯರಾಗಿದ್ದರು. ಇಂದಿರಾಗಾಂಧಿ ಅವರ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸುತ್ತಿದ್ದ ಹೆಗ್ಗಳಿಕೆಯೂ ಅವರದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.