ನವದೆಹಲಿ: ಅಹಮದಾಬಾದ್ ಮತ್ತು ಮುಂಬೈ ನಡುವಣ ಪ್ರಸ್ತಾವಿತ ಬುಲೆಟ್ ರೈಲು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೊ ಅಬೆ ಅವರು ಸೆಪ್ಟೆಂಬರ್ 14ರಂದು ಅಹಮದಾಬಾದ್‌ನಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
750 ಪ್ರಯಾಣಿಕರ ಸಾಮರ್ಥ್ಯದ ಬುಲೆಟ್ ರೈಲು, ಈ ಎರಡು ನಗರಗಳ ನಡುವಣ ಪ್ರಯಾಣದ ಅವಧಿಯನ್ನು ಏಳು ಗಂಟೆಗಳಿಂದ ಮೂರು ಗಂಟೆಗಳಿಗೆ ಕುಗ್ಗಿಸುವ ನಿರೀಕ್ಷೆ ಇದೆ.
₹1.10 ಲಕ್ಷ ಕೋಟಿ ವೆಚ್ಚದ ಈ ಯೋಜನೆಗೆ ಜಪಾನ್ ಕೂಡ ಬಂಡವಾಳ ಹೂಡಲಿದೆ. ಯೋಜನೆಗಾಗಿ ಮಣ್ಣಿನ ಪರೀಕ್ಷೆ ಈಗಾಗಲೇ ಪೂರ್ಣಗೊಂಡಿದೆ.
2023ರ ಡಿಸೆಂಬರ್ ಒಳಗಾಗಿ ಯೋಜನೆ ಮುಗಿಸುವ ಗುರಿ ಹೊಂದಲಾಗಿದೆ. ಆದರೆ, 2022ರ ಒಳಗಾಗಿಯೇ ಯೋಜನೆ ಪೂರ್ಣಗೊಳಿಸುವಂತೆ ಸರ್ಕಾರ ಸೂಚಿಸುವ ಸಾಧ್ಯತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.