ADVERTISEMENT

‘ತುರ್ತು ಪರಿಸ್ಥಿತಿ ಮತ್ತೆ ಬರಬಹುದು’

​ಪ್ರಜಾವಾಣಿ ವಾರ್ತೆ
Published 18 ಜೂನ್ 2015, 8:24 IST
Last Updated 18 ಜೂನ್ 2015, 8:24 IST

ನವದೆಹಲಿ (ಪಿಟಿಐ): ‘ದೇಶದಲ್ಲಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕಿ ಮತ್ತೆ ತುರ್ತು ಪರಿಸ್ಥಿತಿ ಬರಬಹುದು’ ಎಂದು ಬಿಜೆಪಿಯ ಹಿರಿಯ ಮುಖಂಡ ಎಲ್‌.ಕೆ.ಅಡ್ವಾಣಿ ಆತಂಕ ವ್ಯಕ್ತಪಡಿಸಿದ್ದಾರೆ.

ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ರಾಷ್ಟ್ರದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಡ್ವಾಣಿ, ‘ಸದ್ಯದ ರಾಜಕೀಯ ಒತ್ತಡಗಳನ್ನು ನೋಡಿದರೆ ಪ್ರಜಾಪ್ರಭುತ್ವಕ್ಕೆ ಕಂಟಕ ಎದುರಾಗುವ ಲಕ್ಷಣಗಳು ಕಾಣುತ್ತವೆ’ ಎಂದಿದ್ದಾರೆ.

‘ಸದ್ಯದ ರಾಷ್ಟ್ರರಾಜಕಾರಣದಲ್ಲಿ ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ಆಶಯಗಳನ್ನು ಗಟ್ಟಿಗೊಳಿಸುವಂಥ ನಾಯಕತ್ವ ಕಾಣಿಸುತ್ತಿಲ್ಲ’ ಎಂದು ಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.