ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜುಲೈ 8 ರಿಂದ ಹಿರಿಯ ಮಾಧ್ಯಮಿಕ ಹಂತದವರೆಗಿನ ಎಲ್ಲಾ ಶಾಲೆಗಳಿಗೆ 10 ದಿನಗಳವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಈ ಸಂಬಂಧ ಶಿಕ್ಷಣ ಇಲಾಖೆ ಭಾನುವಾರ ತಡರಾತ್ರಿ ಆದೇಶ ಹೊರಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರ ವಿಭಾಗದಲ್ಲಿ ಬರುವ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದ ಖಾಸಗಿ ಶಾಲೆಗಳಿಗೆ ಜುಲೈ 08 ರಿಂದ 17ರವರೆಗೆ ರಜೆ ನೀಡಲಾಗಿದೆ. ಅಗತ್ಯವಿದ್ದಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ತರಗತಿ ನಡೆಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಾಶ್ಮೀರ ಕಣಿವೆಯ ಈ ಬೇಸಿಗೆಯಲ್ಲಿ ವಾಡಿಕೆಗಿಂತ ತಾಪಮಾನ ಹೆಚ್ಚಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಭಾನುವಾರ 32.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.