ಶಿಲ್ಲಾಂಗ್: ಮೇಘಾಲಯದಲ್ಲಿ ಭಾರಿ ಮಳೆಯಿಂದಾಗಿ ದಿಢೀರ್ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಒಂದೇ ಕುಟುಂಬದ ಏಳು ಮಂದಿ ಸೇರಿ ಒಟ್ಟು ಹತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಗರೋ ಹಿಲ್ಸ್ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ ಹತ್ತು ಜನರು ಮೃತಪಟ್ಟಿದ್ದಾರೆ. ಕೆಲವೆಡೆ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಮೃತಪಟ್ಟವರಲ್ಲಿ ಮೂವರು ಅಪ್ರಾಪ್ತರು ಎಂದೂ ತಿಳಿಸಿದ್ದಾರೆ.
ದಕ್ಷಿಣ ಮೇಘಾಲಯದ ಜಿಲ್ಲೆಗಳ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಅವರು ಪರಿಶೀಲನೆ ನಡೆಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಎಸ್‌ಡಿಆರ್‌ಎಫ್‌ನ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದೆ ಎಂದು ಸಂಗ್ಮಾ ಹೇಳಿದ್ದಾರೆ.
ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಸಂಗ್ಮಾ, ಅವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.