ಪಟ್ನಾ: ಬಿಹಾರದಲ್ಲಿ ಮುಂದಿನ ದಿನಗಳಲ್ಲಿ ಯುವ ಜನರಿಗೆ 10 ಲಕ್ಷ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಣೆ ಮಾಡಿದ್ದಾರೆ.
ಇದನ್ನು ಬೆಂಬಲಿಸಿರುವಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಈ ಉದ್ಯೋಗಾವಕಾಶಗಳನ್ನು ದುಪ್ಪಟ್ಟು ಮಾಡುವುದಾಗಿಯೂ ಹೇಳಿದ್ದಾರೆ.
ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದಸ್ವಾತಂತ್ರ್ಯ ದಿನಾಚರಣೆಕಾರ್ಯಕ್ರಮದಲ್ಲಿ ಮಾತನಾಡಿದ ನಿತೀಶ್ ಕುಮಾರ್ ಅವರು ಮಹಾಘಟಬಂಧನ ಸರ್ಕಾರವು ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದರು. ಹಾಗೇ ವಿವಿಧ ವಲಯಗಳಲ್ಲಿ 10 ಲಕ್ಷ ಉದ್ಯೋಗಾವಕಾಶಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದರು.
ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡಯುವ ಜನರಿಗೆ 10 ಲಕ್ಷ ಉದ್ಯೋಗ ನೀಡುವುದಾಗಿ ಟ್ವೀಟ್ ಮೂಲಕ ಘೋಷಣೆಮಾಡಿದ್ದರು.
ರಾಜ್ಯದ ಜನರಿಗೆ ನಾವು ಎಷ್ಟು ಸಾಧ್ಯವೋ ಅಷ್ಟು ಉದ್ಯೋಗ, ಸ್ವಯಂ ಉದ್ಯೋಗದ ಅವಕಾಶಗಳನ್ನು ಕಲ್ಪಿಸುತ್ತೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.