ಇಂದೋರ್: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಅಂದು ಮಧ್ಯಪ್ರದೇಶದ ಇಂದೋರ್ ನಗರವು 1.11 ಕೋಟಿ ದೀಪಗಳಿಂದ ಬೆಳಗಲಿದೆ. ರಾಜ್ಯದ ಪ್ರತಿ ಮನೆಗಳಲ್ಲಿ ದೀಪಗಳನ್ನು ಬೆಳಗಿಸಲಾಗುವುದು ಎಂದು ಸಚಿವ ಕೈಲಾಶ್ ವಿಜಯವರ್ಗಿಯ ತಿಳಿಸಿದ್ದಾರೆ.
ರಾಮ ಮಂದಿರ ಉದ್ಘಾಟನೆಯ ಆಚರಣೆಯ ಕುರಿತು ಇಂದೋರ್‌ನ ಪ್ರಮುಖ ನಿವಾಸಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಉದ್ಘಾಟನೆಯ ದಿನ ಶ್ರೀರಾಮ ಮತ್ತು ಅಯೋಧ್ಯೆಯ ರಾಮ ಮಂದಿರದ ವಿಷಯದ ಕುರಿತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗುವುದು. ಸ್ಪರ್ಧೆಯಲ್ಲಿ ಸುಮಾರು 31,000 ಶಾಲಾ ಮಕ್ಕಳು ಭಾಗವಹಿಸಲಿದ್ದಾರೆ. ಈ ಮೂಲಕ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸುವ ಪ್ರಯತ್ನ ನಡೆಯಲಿದೆ ಎಂದು ವರ್ಗಿಯ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.