ADVERTISEMENT

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆ, ಪ್ರತಿಭಟನೆ:12 ಜನರ ವಿರುದ್ಧ ‌‌FIR

ಪಿಟಿಐ
Published 3 ಅಕ್ಟೋಬರ್ 2024, 9:43 IST
Last Updated 3 ಅಕ್ಟೋಬರ್ 2024, 9:43 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಲಖನೌ: ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ಮುಹಮ್ಮದ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸುವ ವೇಳೆ ಧಾರ್ಮಿಕ ಉದ್ವಿಗ್ನತೆ ಸೃಷ್ಟಿಸಲು ಪ್ರಯತ್ನಿಸಿದ 12 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ADVERTISEMENT

ಪ್ರವಾದಿ ಮುಹಮ್ಮದ್ ವಿರುದ್ಧ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯದ ವ್ಯಾಪಾರಿ ಮಂಡಲದ ವಿಭಾಗೀಯ ಅಧ್ಯಕ್ಷ ಕನ್ಹಯ್ಯಾ ಕಸೌಧನ್ ವಿರುದ್ಧ ಅಬ್ದುಲ್ ಲತೀಫ್ ಎಂಬುವವರು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಸೌಧನ್ ಬಂಧನಕ್ಕೆ ಒತ್ತಾಯಿಸಿ ಕೆಲವರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಿದ್ದ 12 ಮಂದಿ ಅಪರಿಚಿತರ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಗಳ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಎರಡೂ ಪ್ರಕರಣಗಳಲ್ಲೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.