ADVERTISEMENT

ದೇಶದಲ್ಲಿ ಪ್ರತ್ಯೇಕ ಅಪಘಾತ: 12 ಜನ ಸಾವು

ಪಿಟಿಐ
Published 29 ಸೆಪ್ಟೆಂಬರ್ 2024, 4:57 IST
Last Updated 29 ಸೆಪ್ಟೆಂಬರ್ 2024, 4:57 IST
<div class="paragraphs"><p>ಅಪಘಾತ (ಸಾಂಕೇತಿಕ ಚಿತ್ರ)</p></div>

ಅಪಘಾತ (ಸಾಂಕೇತಿಕ ಚಿತ್ರ)

   

ನವದೆಹಲಿ: ಮಧ್ಯಪ್ರದೇಶ ಹಾಗೂ ಬಿಹಾರ ರಾಜ್ಯದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 12 ಜನರು ಮೃತಪಟ್ಟು 24 ಜನರು ಗಾಯಗೊಂಡಿದ್ದಾರೆ. 

ಮಧ್ಯಪ್ರದೇಶದ ಮೇಹಾರ್ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಖಾಸಗಿ ಬಸ್‌ ಹಾಗೂ ಟ್ರಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 9 ಜನರು ಮೃತಪಟ್ಟು 20 ಹೆಚ್ಚು ಜನರು ಗಾಯಗೊಂಡಿದ್ದಾರೆ. 

ADVERTISEMENT

ಮೇಹಾರ್ ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಶನಿವಾರ ತಡರಾತ್ರಿ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಿಂದ ಬರುತ್ತಿದ್ದ ಬಸ್‌ ಮಹಾರಾಷ್ಟ್ರದ ನಾಗಪುರಕ್ಕೆ ತೆರಳುತ್ತಿತ್ತು. ರಾತ್ರಿ 11ಗಂಟೆ ಸುಮಾರಿಗೆ ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಸ್ ಅತಿವೇಗದಲ್ಲಿ ಚಲಿಸುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಬಿಹಾರದಲ್ಲಿ ಅಪಘಾತ ಮೂರು ಸಾವು...

ಬಿಹಾರದ ಕೈಮೂರ್ ಜಿಲ್ಲೆಯ ಮೊಹನಿಯಾ ಬಳಿ ಭಾನುವಾರ ಬೆಳಿಗ್ಗೆ 5ಗಂಟೆ ಸುಮಾರಿಗೆ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಹನಿಯಾದ ಸೇವಾನಿಕೇತನದ ಬಳಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಬಗ್ಗೆ ಮಾಹಿತಿ ಲಭ್ಯವಾಯಿತು. ತಕ್ಷಣವೇ ಪೊಲೀಸ್ ತಂಡ ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.