ADVERTISEMENT

ಬಿಹಾರದಲ್ಲಿ 12 ನಕಲಿ ಅಭ್ಯರ್ಥಿಗಳ ಬಂಧನ

ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ

ಪಿಟಿಐ
Published 8 ಜುಲೈ 2024, 16:05 IST
Last Updated 8 ಜುಲೈ 2024, 16:05 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ದರ್ಭಂಗಾ (ಬಿಹಾರ): ದರ್ಭಂಗಾ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ)–2024 ಬರೆಯುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ 12 ಜನರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.

ಲಹೇರಿಯಾಸರಾಯ್‌ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಒಂಬತ್ತು ಜನರನ್ನು ಬಂಧಿಸಿದ್ದರೆ, ಸಾದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಹಾಗೂ ಬಹದ್ದೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಬ್ಬರನ್ನು ಬಂಧಿಸಲಾಗಿದೆ ಎಂದು ದರ್ಭಂಗಾ ಪೊಲೀಸ್ ವರಿಷ್ಠಾಧಿಕಾರಿ ಜಗುನಾಥ ರೆಡ್ಡಿ ತಿಳಿಸಿದ್ದಾರೆ.

ADVERTISEMENT

ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಬಯೊಮೆಟ್ರಿಕ್‌ ಬೆರಳಚ್ಚನ್ನು ಸ್ಕ್ಯಾನ್‌ ಮಾಡಿದ ಸಂದರ್ಭ, ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ ಎಂದಿದ್ದಾರೆ.

ಪರೀಕ್ಷಾ ಮೇಲ್ವಿಚಾರಕರು ನೀಡಿದ ದೂರಿನನ್ವಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆದಿದೆ. ಪರೀಕ್ಷೆಯನ್ನು ಬರೆಯಬೇಕಿದ್ದ ನೈಜ ಅಭ್ಯರ್ಥಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಬಂಧಿತರಿಗೆ ಅಂತರರಾಜ್ಯ ವಂಚಕರ ಜಾಲದ ಸಂಪರ್ಕವಿದೆಯೇ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.