ADVERTISEMENT

ಬಿಹಾರ | ಅಭ್ಯರ್ಥಿಗಳ ಸೋಗಿನಲ್ಲಿ ಸಿಟಿಇಟಿ ಪರೀಕ್ಷೆ ಬರೆದ 12 ಜನರ ಬಂಧನ

ಪಿಟಿಐ
Published 8 ಜುಲೈ 2024, 3:11 IST
Last Updated 8 ಜುಲೈ 2024, 3:11 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ದರ್ಭಾಂಗಾ (ಬಿಹಾರ): ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಇತರ ಅಭ್ಯರ್ಥಿಗಳ ಸೋಗಿನಲ್ಲಿ ‌ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ )2024ಯನ್ನು ಬರೆದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ 12 ಮಂದಿಯನ್ನು ಬಿಹಾರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ದರ್ಭಾಂಗ ಎಸ್‌ಎಸ್‌ಪಿ ಜಗುನಾಥ ರೆಡ್ಡಿ, 'ಲಹೇರಿಯಾಸರೈ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಕೇಂದ್ರಗಳಿಂದ 9 ಮಂದಿ, ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂದ್ರದಿಂದ ಇಬ್ಬರು ಹಾಗೂ ಬಹದ್ದೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂದ್ರದಿಂದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಬಯೋಮೆಟ್ರಿಕ್ ಫಿಂಗರ್‌ಪ್ರಿಂಟ್ ಸ್ಕ್ಯಾನ್ ಮಾಡುವಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಪರಿವೀಕ್ಷಕರು ಮತ್ತು ನಿರ್ವಾಹಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಂಚಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ. ಅಸಲಿ ಅಭ್ಯರ್ಥಿಗಳ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ' ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.