ನವದೆಹಲಿ: 22 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿರುವ 1,260 ಸಗಟು ಮಂಡಿಗಳನ್ನು ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇ-ನಾಮ್) ಮೂಲಕ ಏಕೀಕರಿಸಿದ್ದೇವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.
‘ಸದ್ಯ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ದೇಶದಾದ್ಯಂತ ಇರುವ 6,900 ಎಪಿಎಂಸಿ ಮಂಡಿಗಳಲ್ಲಿ ಹರಾಜು ಮಾಡುತ್ತಿದ್ದಾರೆ. ಹಲವು ರೈತರು ಇ–ನಾಮ್ ವೇದಿಕೆಯ ಮೂಲಕ ಆನ್‌ಲೈನ್ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಅವರು ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ.
ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಲ್ಲಿಸಿರುವ ಪ್ರಸ್ತಾವದ ಆಧಾರದಲ್ಲಿ ಮಂಡಿಗಳನ್ನು ಇ–ನಾಮ್ ವೇದಿಕೆಯ ಮೂಲಕ ಏಕೀಕರಿಸುತ್ತಿದ್ದೇವೆ ಎಂದೂ ಸಚಿವರು ತಿಳಿಸಿದ್ದಾರೆ.
2016 ಏಪ್ರಿಲ್‌ನಲ್ಲಿ ಪ್ರಾರಂಭಿಸಲಾದ ಇ–ನಾಮ್ ಅನ್ನುಕೇಂದ್ರ ಸರ್ಕಾರದ ಸಣ್ಣ ರೈತರ ಕೃಷಿ ವ್ಯಾಪಾರ ಒಕ್ಕೂಟವು(ಎಸ್‌ಎಫ್‌ಎಸಿ) ರಾಜ್ಯ ಸರ್ಕಾರಗಳ ಬೆಂಬಲದೊಂದಿಗೆ ಅನುಷ್ಠಾನಗೊಳಿಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.