ಠಾಣೆ: ನವಿ ಮುಂಬೈನ ಅನಾಥಾಶ್ರಮವೊಂದರಲ್ಲಿ ಆಶ್ರಯ ಪಡೆದಿದ್ದ 13 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
‘ಅನಾಥಾಶ್ರಮದ ಸಿಬ್ಬಂದಿಯೊಬ್ಬರು ಬಾಲಕಿ ಉಳಿದುಕೊಂಡಿದ್ದ ಕೊಠಡಿಯ ಕಿಟಕಿ ಬಾಗಿಲ ಮೂಲಕ ನುಗ್ಗಿ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಜುಲೈನಲ್ಲಿ ನಡೆದಿದೆ. ಸೆಪ್ಟೆಂಬರ್‌ನಲ್ಲಿ ಮತ್ತೊಬ್ಬ ವ್ಯಕ್ತಿ ಇದೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಎರಡೂ ಘಟನೆಗಳ ಕುರಿತು ಗೊತ್ತಿದ್ದರೂ ಆಶ್ರಯಮ ಮೇಲ್ವಿಚಾರಕಿಯು ಪೊಲೀಸರಿಗೆ ದೂರು ನೀಡಿಲ್ಲ’ ಎಂದು ಪೊಲೀಸರು ಸೋಮವಾರ ವಿವರಿಸಿದರು.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ), 74 (ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಎಸಗಿದ ದೌರ್ಜನ್ಯ) ಹಾಗೂ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಯಾರನ್ನೂ ಪೊಲೀಸರು ಬಂಧಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.