ADVERTISEMENT

ಕೃಷಿ ತ್ಯಾಜ್ಯ ಸುಟ್ಟ ಆರೋಪ; ಹರಿಯಾಣದಲ್ಲಿ 14 ರೈತರ ಬಂಧನ

ಪಿಟಿಐ
Published 21 ಅಕ್ಟೋಬರ್ 2024, 10:45 IST
Last Updated 21 ಅಕ್ಟೋಬರ್ 2024, 10:45 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಚಂಡೀಗಢ: ತಮ್ಮ ಹೊಲಗಳಲ್ಲಿ ಕೃಷಿ ತ್ಯಾಜ್ಯ ಸುಟ್ಟ ಆರೋಪದ ಮೇಲೆ ಹರಿಯಾಣದ ಕೈತಾಲ್ ಜಿಲ್ಲೆಯಲ್ಲಿ 14 ರೈತರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸುಗ್ಗಿಯ ನಂತರ ಅಕ್ಟೋಬರ್ ಮತ್ತು ನವೆಂಬರ್ ನಡುವೆ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಕೃಷಿ ತ್ಯಾಜ್ಯ ಸುಡುವುದು ಸಾಮಾನ್ಯವಾಗಿದ್ದು, ಇದು ರಾಷ್ಟ್ರ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ಕುಸಿಯಲು ಕಾರಣ ಎಂದು ಹೇಳಲಾಗುತ್ತಿದೆ.

ADVERTISEMENT

ಇತ್ತೀಚೆಗೆ ದೆಹಲಿ–ಎನ್‌ಸಿಆರ್‌, ಹರಿಯಾಣದ ಕೆಲವು ಪ್ರದೇಶಗಳಲ್ಲಿ ವಾಯು ಗುಣಮಟ್ಟ ಕುಸಿತ ಕಂಡಿರುವುದು ವರದಿಯಾಗಿದೆ.

‘ಕೃಷಿ ತ್ಯಾಜ್ಯ ಸುಟ್ಟ ಆರೋಪದ ಮೇಲೆ ಕಳೆದ ಕೆಲವು ದಿನಗಳಲ್ಲಿ ಜಿಲ್ಲೆಯ 14 ರೈತರನ್ನು ಬಂಧಿಸಲಾಗಿದೆ. ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ’ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಬಿರ್ಭಾನ್‌ ತಿಳಿಸಿದರು.

ಕೃಷಿ ತ್ಯಾಜ್ಯ ಸುಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸದಿರುವುದರ ಬಗ್ಗೆ ಪಂಜಾಬ್ ಮತ್ತು ಹರಿಯಾಣದ ಸರ್ಕಾರಗಳನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಅಕ್ಟೋಬರ್ 23ರಂದು ನ್ಯಾಯಾಲಯದ ಮುಂದೆ ಹಾಜರಾಗಿ ವಿವರಣೆ ನೀಡುವಂತೆ ಉಭಯ ರಾಜ್ಯಗಳ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.