ADVERTISEMENT

ಕೊಲೆ ಯತ್ನ | 14 ವರ್ಷಗಳ ಶಿಕ್ಷೆಗೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 17:55 IST
Last Updated 22 ಜುಲೈ 2024, 17:55 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಕೊಲೆ ಯತ್ನದ ಪ್ರಕರಣಗಳಲ್ಲಿ (ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307) ತಪ್ಪಿತಸ್ಥರಿಗೆ 14 ವರ್ಷಗಳ ಕಠಿಣ ಜೈಲುಶಿಕ್ಷೆಯನ್ನು ವಿಧಿಸಲು ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.

ಇಂತಹ ಪ್ರಕರಣಗಳಲ್ಲಿ 10 ವರ್ಷಗಳ ಜೈಲುಶಿಕ್ಷೆ, ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಯನ್ನು ವಿಧಿಸಬಹುದು ಎಂದು ಹೇಳಿದೆ.

ಕೊಲೆ ಯತ್ನ ಅಪರಾಧ ನಡೆದಿದೆ ಎಂದು ಹೇಳಲು ಸಂತ್ರಸ್ತ ವ್ಯಕ್ತಿಗೆ ದೈಹಿಕವಾಗಿ ಗಾಯ ಆಗಿರಲೇಬೇಕು ಎಂದೇನೂ ಇಲ್ಲ ಎಂದು ಕೂಡ ಕೋರ್ಟ್ ಸ್ಪಷ್ಟಪಡಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.