ಪಾಲ್ಘರ್: ಸಾಮಾಜಿಕ ಮಾಧ್ಯಮದ ಮೂಲಕ ಸ್ನೇಹ ಬೆಳೆಸಿದ್ದ ಇಬ್ಬರು ವ್ಯಕ್ತಿಗಳು 15 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಜಿಲ್ಲಾ ಗ್ರಾಮಾಂತರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಬ್ಬರೂ ಆರೋಪಿಗಳು ತಮ್ಮನ್ನು ನಕಲಿ ಹೆಸರುಗಳಿಂದ ಗುರುತಿಸಿಕೊಂಡಿದ್ದರು. ಅವರಲ್ಲಿ ಒಬ್ಬ ಇನ್ಸ್ಟಾಗ್ರಾಮ್ನಲ್ಲಿ ಸಂತ್ರಸ್ತೆಯ ಜೊತೆ ಸ್ನೇಹ ಬೆಳೆಸಿದ್ದ. ಏಪ್ರಿಲ್ 30 ರಂದು ಅವಳನ್ನು ತನ್ನ ಮನೆಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದ. ಬಳಿಕ ಮೇ 4 ರಂದು ಇಬ್ಬರು ಆರೋಪಿಗಳು ಬಾಲಕಿಯನ್ನು ವಿವಿಧ ಸ್ಥಳಗಳಿಗೆ ಕರೆದುಕೊಂಡು ಹೋಗಿ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸದ್ಯ ಆರೋಪಿಗಳನ್ನು ಮೇ 9ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.