ಮುಜಾಫ್ಫರ್‌ನಗರ: 15 ವರ್ಷದ ಬಾಲಕಿಗೆ ಶಾಲಾ ಸಹಪಾಠಿಗಳಿಬ್ಬರು ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದರು.
ಶನಿವಾರ ಬಾಲಕಿ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕರು ಲೈಂಗಿಕ ಕಿರುಕುಳ ನೀಡಿ, ನಂತರ ಕೊಲೆ ಮಾಡಲು ಯತ್ನಿಸಿದ್ದು, ಬಾಲಕಿ ಅವರಿಂದ ತಪ್ಪಿಸಿಕೊಂಡಿದ್ದಾಳೆ ಎಂದು ಬಾಲಕಿಯ ಕುಟುಂಬದವರು ದೂರು ದಾಖಲಿಸಿದ್ದಾರೆ.
ಆರೋಪಿಗಳು ಬಾಲಕಿಯ ವಿಡಿಯೊ ಮಾಡಿ, ಅದನ್ನು ಎಡಿಟ್ ಮಾಡಿ ನಂತರ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಬಾಲಕಿ ಕುಟುಂಬಸ್ಥರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.