ADVERTISEMENT

ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ: 15 ವರ್ಷದ ಬಾಲಕಿ ಮೇಲೆ ದೌರ್ಜನ್ಯ

ಪಿಟಿಐ
Published 3 ಅಕ್ಟೋಬರ್ 2020, 8:55 IST
Last Updated 3 ಅಕ್ಟೋಬರ್ 2020, 8:55 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬಲಿಯಾ(ಉತ್ತರ ಪ್ರದೇಶ): 15 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಘಟನೆ ಸಿಕಂದರಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದರು.

ಬಾಲಕಿಯನ್ನು ಬುಧವಾರ ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದೆ. ಶುಕ್ರವಾರ ಬೆಳಿಗ್ಗೆ ರಸ್ರಾ ಬಸ್‌ ನಿಲ್ದಾಣದ ಬಳಿ ಬಾಲಕಿಯನ್ನು ರಕ್ಷಿಸಲಾಗಿದ್ದು, ಆರೋಪಿ ಆಸೀಫ್‌ನನ್ನು ಬಂಧಿಸಲಾಗಿದೆ.

ಈ ಸಂಬಂಧ ಬಾಲಕಿಯ ತಂದೆ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದುಎಸ್‌ಎಚ್‌ಒಅಮರ್ಜೀತ್ ಯಾದವ್ ಅವರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.