ನವದೆಹಲಿ: 16 ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 48 ಸ್ಥಾನಗಳ ಟ್ರೆಂಡಿಂಗ್ ಲಭ್ಯವಾಗಿದ್ದು ಬಿಜೆಪಿ ಮೈತ್ರಿಕೂಟ 22, ಕಾಂಗ್ರೆಸ್ ನೇತೃತ್ವದ ಯುಪಿಎ 12 ಹಾಗೂ ಇತರರು 14 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಈ ಹಿಂದೆ 48 ಸ್ಥಾನಗಳ ಪೈಕಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು.
ಉತ್ತರ ಪ್ರದೇಶದ 11 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 6 ಸ್ಥಾನಗಳಲ್ಲಿ, ಸಮಾಜವಾದಿ ಪಕ್ಷ 2, ಬಿಎಸ್‌ಪಿ,ಎಪಿ ತಲಾ 1 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
ಕೇರಳದ 5 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಪಿಐ(ಎಂ), ಕಾಂಗ್ರೆಸ್ ತಲಾ 2ರಲ್ಲಿ, ಮುಸ್ಲಿಂ ಲೀಗ್ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.
ಈಶಾನ್ಯ ಭಾರತದ ಅಸ್ಸಾಂ ರಾಜ್ಯದಲ್ಲಿ ಬಿಜೆಪಿ 4 ಸ್ಥಾನಗಳಲ್ಲೂ ಮುನ್ನಡೆ ಕಾಯ್ದುಕೊಂಡಿದೆ.
ಬಿಜೆಪಿ ಆಡಳಿತ ಇರುವ ಗುಜರಾತ್ ರಾಜ್ಯದಲ್ಲಿ 6 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಬಿಹಾರದ 5 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಯು 2, ಆರ್‌ಜೆಡಿ 1, ಇತರರು 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಛತ್ತಿಸ್‌ಗಡ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿನ 5 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಹಿಮಾಚಲ ಪ್ರದೇಶದ 2 ಸ್ಥಾನಗಳಲ್ಲಿ ಬಿಜೆಪಿ, ತಮಿಳುನಾಡಿನ 2 ಕ್ಷೇತ್ರಗಳಲ್ಲಿ ಎಐಎಡಿಎಂಕೆ ಮುನ್ನಡೆ ಕಾಯ್ದುಕೊಂಡಿವೆ.
ತೆಲಂಗಾಣದಲ್ಲಿ ಟಿಆರ್‌ಎಸ್, ಮೇಘಾಲಯದಲ್ಲಿ ಯುಡಿಪಿ, ಸಿಕ್ಕಿಂ ರಾಜ್ಯದಲ್ಲಿ ಬಿಜೆಪಿ ಹಾಗೂ ಎಸ್‌ಕೆಎಂ ತಲಾ 1 ಸ್ಥಾನಗಳಲ್ಲಿ ಮುನ್ನಡೆಯಲ್ಲಿವೆ.
(12.30ರವರೆಗಿನ ಟ್ರೆಂಡಿಂಗ್)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.