ಅಮೇಠಿ (ಉ. ಪ್ರದೇಶ): ಉತ್ತರ ಪ್ರದೇಶದ ಅಮೇಠಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
16 ವರ್ಷದ ಬಾಲಕಿ ಮೇಲೆ ಯುವಕನೊಬ್ಬ ಕಳೆದೊಂದು ವರ್ಷದಿಂದ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಾಲಕಿ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡ ಬಳಿಕ ಅಪರಾಧ ಪ್ರಕರಣವು ಬೆಳಕಿಗೆ ಬಂದಿದ್ದು, ಆಕೆ ಏಳು ತಿಂಗಳ ಗರ್ಭಿಣಿ ಎಂದು ಹೇಳಿದ್ದಾರೆ.
ಬಳಿಕ ಬಾಲಕಿಯನ್ನು ಪ್ರಶ್ನಿಸಿದಾಗ, ಕಳೆದೊಂದು ವರ್ಷದಲ್ಲಿ ಹಲವು ಬಾರಿ ಅತ್ಯಾಚಾರಕ್ಕೊಳಗಾಗಿರುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಗರ್ಭಧಾರಣೆಯನ್ನು ತಡೆಯುವ ನಿಟ್ಟಿನಲ್ಲಿ ಸ್ಥಳೀಯ ಔಷಧಿ ವ್ಯಾಪಾರಿಯಿಂದ ಮಾತ್ರೆ ತೆಗೆದುಕೊಂಡ ಪರಿಣಾಮ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ವಿಚಾರಣೆ ಕೈಗೆತ್ತಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸುವ ಪ್ರಯತ್ನ ಆರಂಭಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.