ADVERTISEMENT

ತೆಲಂಗಾಣ: ಬ್ಯಾಂಕ್‌ನಲ್ಲಿ ₹13 ಕೋಟಿ ಮೌಲ್ಯದ 19 ಕೆ.ಜಿಗೂ ಅಧಿಕ ಚಿನ್ನಾಭರಣ ಕಳವು

ಪಿಟಿಐ
Published 20 ನವೆಂಬರ್ 2024, 7:51 IST
Last Updated 20 ನವೆಂಬರ್ 2024, 7:51 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

– ಐ ಸ್ಟಾಕ್ ಚಿತ್ರ

ಹೈದರಾಬಾದ್: ತೆಲಂಗಾಣದ ವಾರಂಗಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್‌ನಲ್ಲಿ ₹13.6 ಕೋಟಿ ಮೌಲ್ಯದ 19 ಕೆ.ಜಿ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ರಾಯಪರ್ತಿ ಮಂಡಲದಲ್ಲಿರುವ ಬ್ಯಾಂಕ್ ಶಾಖೆಯ ಕಿಟಕಿಯನ್ನು ಗ್ಯಾಸ್ ಕಟ್ಟರ್‌ನಿಂದ ಕತ್ತರಿಸಿ ಒಳನುಗ್ಗಿರುವ ದರೋಡೆಕೋರರು, 19.5 ಕೆ.ಜಿ ತೂಕದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳ್ಳತನ ನಡೆದಿರುವ ಬಗ್ಗೆ ಬ್ಯಾಂಕ್ ಸಿಬ್ಬಂದಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ಯಾಂಕ್‌ನಲ್ಲಿರುವ ಸಿಸಿಟಿವಿ ಕ್ಯಾಮೆರಾ ಹಾಳಾಗಿರುವುದು ದೃಢಪಟ್ಟಿದೆ. ಜತೆಗೆ, ಕಳ್ಳರು ಬ್ಯಾಂಕ್‌ನಿಂದ ಡಿಜಿಟಲ್ ವಿಡಿಯೊ ರೆಕಾರ್ಡರ್ (ಡಿವಿಆರ್) ತೆಗೆದುಕೊಂಡು ಹೋಗಿದ್ದಾರೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.