ನವದೆಹಲಿ: 1984ರ ಸಿಖ್ ವಿರೋಧಿ ದಂಗೆಯ ವೇಳೆ ದೆಹಲಿಯ ಪುಲ್ ಬಂಗಾಶ್ ಪ್ರದೇಶದಲ್ಲಿ ಮೂವರನ್ನು ಹತ್ಯೆ ಮಾಡಿ, ಗುರುದ್ವಾರಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣದ ವಿಚಾರಣೆಯನ್ನು ಇಲ್ಲಿನ ನ್ಯಾಯಾಲಯ ಸೆಪ್ಟೆಂಬರ್ 6 ರಂದು ನಡೆಸಲಿದೆ.
ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ವಿಧಿ ಗುಪ್ತಾ ಆನಂದ್ ಅವರು, ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಅವರಿಗೆ ವಾದಿಸಲು ಸಮಯಾವಕಾಶ ನೀಡಿದ್ದಾರೆ. ಸಿಬಿಐ ಸಲ್ಲಿಸಿದ್ದ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅವರು ಸಮಯಾವಕಾಶ ನೀಡಿದ್ದಾರೆ.
ಈ ಪ್ರಕಣದಲ್ಲಿ ಸೆಷನ್ಸ್ ನ್ಯಾಯಾಲಯವು ಟೈಟ್ಲರ್ ಅವರಿಗೆ ಈ ಹಿಂದೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.