ADVERTISEMENT

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಸಿಆರ್‌ಪಿಎಫ್‌ನ 5 ಯೋಧರು ಹುತಾತ್ಮ

​ಪ್ರಜಾವಾಣಿ ವಾರ್ತೆ
Published 12 ಜೂನ್ 2019, 14:38 IST
Last Updated 12 ಜೂನ್ 2019, 14:38 IST
ಕೃಪೆ: ಟ್ವಿಟರ್
ಕೃಪೆ: ಟ್ವಿಟರ್   

ಶ್ರೀನಗರ:ಜಮ್ಮು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಬುಧವಾರ ಉಗ್ರರು ದಾಳಿ ನಡೆಸಿದ್ದು ಇದರಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ನ 5 ಯೋಧರು ಹುತಾತ್ಮರಾಗಿದ್ದಾರೆ.

ಅನಂತ್‌ನಾಗ್‌ನ ಕೆಪಿ ರಸ್ತೆಯಲ್ಲಿ ಸಿಆರ್‌ಪಿಎಫ್ ಯೋಧರು ಗಸ್ತು ತಿರುಗುತ್ತಿದ್ದಾಗ ಇಬ್ಬರು ಉಗ್ರರುಗ್ರೆನೇಡ್ ದಾಳಿ ನಡೆಸಿದ್ದಾರೆ.
ಈ ದಾಳಿಯಲ್ಲಿ 5 ಯೋಧರು ಹುತಾತ್ಮರಾಗಿದ್ದಾರೆ.

ಇಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ.

ADVERTISEMENT

ದಾಳಿಯಲ್ಲಿ ಓರ್ವ ಉಗ್ರ ಮತ್ತು ಅನಾಮಿಕ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ.ಅನಂತ್‌ನಾಗ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಫೀಸರ್ ಅರ್ಷದ್ ಅಹಮದ್ ಅವರಿಗೆ ಗಾಯಗಳಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಕರೆದೊಯ್ಯಲಾಗಿದೆ ಎಂದು ಸುದ್ದಿಮೂಲಗಳು ವರದಿ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.