ADVERTISEMENT

ಈಗಿನ ದರಕ್ಕೆ ಕಾಂಗ್ರೆಸ್‌ ಕಾಲದಲ್ಲಿ ಎರಡು ಸಿಲಿಂಡರ್‌ ಬರುತ್ತಿತ್ತು: ರಾಹುಲ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಮೇ 2022, 5:40 IST
Last Updated 8 ಮೇ 2022, 5:40 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ    

ನವದೆಹಲಿ: ಈಗಿನ ಬೆಲೆಗೆ 2014ರಲ್ಲಿ ಎರಡು ಗ್ಯಾಸ್‌ ಸಿಲಿಂಡರ್‌ಗಳು ಬರುತ್ತಿದ್ದವು ಎಂದು ರಾಹುಲ್‌ ಗಾಂಧಿ ಅವರು ಭಾನುವಾರ ಕೇಂದ್ರ ಸರ್ಕಾರವನ್ನು ಗೇಲಿ ಮಾಡಿದ್ದಾರೆ.

ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಶನಿವಾರ ₹50 ಹೆಚ್ಚಳ ಮಾಡಲಾಗಿತ್ತು. ಹೀಗಾಗಿ, 14.2 ಕೆ.ಜಿ ತೂಕದ ಸಿಲಿಂಡರ್ ಬೆಲೆ ಬೆಂಗಳೂರಿನಲ್ಲಿ ₹1002.50ಕ್ಕೆ ತಲುಪಿತ್ತು.

ಅಡುಗೆ ಅನಿಲ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ ಅವರು, 2014ಕ್ಕೂ ಹಿಂದಿನ ಬೆಲೆ ಮತ್ತು ಈಗಿನ ಬೆಲೆಯನ್ನು ತುಲನೆ ಮಾಡಿದ್ದಾರೆ.

ADVERTISEMENT

‘ಎಲ್‌ಪಿಜಿ ಸಿಲಿಂಡರ್‌ 2014ರಲ್ಲಿ ₹410 ಇತ್ತು. ₹827 ಸಬ್ಸಿಡಿ ದೊರೆಯುತ್ತಿತ್ತು. ಈಗ ಎಲ್‌ಪಿಜಿ ₹999 (ದೆಹಲಿ ದರ) ದಾಟಿದೆ. ಶೂನ್ಯ ಸಬ್ಸಿಡಿ ದೊರೆಯುತ್ತಿದೆ. ಭಾರತೀಯ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಕಲ್ಯಾಣಕ್ಕಾಗಿ ಕಾಂಗ್ರೆಸ್ ಆಡಳಿತವೇ ಸೂಕ್ತ. ಇದು ನಮ್ಮ ಆರ್ಥಿಕ ನೀತಿಯೂ ಆಗಿದೆ’ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.