ADVERTISEMENT

ಜಮ್ಮು–ಕಾಶ್ಮೀರದಲ್ಲಿ ಭಾರತೀಯ ವಾಯುಪಡೆಯ ಮಿಗ್‌ ವಿಮಾನ ಪತನ; ಇಬ್ಬರು ಪೈಲಟ್‌ ಸಾವು

ಏಜೆನ್ಸೀಸ್
Published 27 ಫೆಬ್ರುವರಿ 2019, 6:11 IST
Last Updated 27 ಫೆಬ್ರುವರಿ 2019, 6:11 IST
   

ನವದೆಹಲಿ: ಭಾರತೀಯ ವಾಯುಪಡೆಯ ಮಿಗ್‌ ವಿಮಾನ ಪತನಗೊಂಡು ಇಬ್ಬರು ಪೈಲಟ್‌ ಸಾವಿಗೀಡಾಗಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಬಡಗಾಂ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ಮಿಗ್‌-21 ವಿಮಾನ ಪತನಗೊಂಡಿದೆ. ಜೈಷ್‌ ಉಗ್ರ ತರಬೇತಿ ಶಿಬಿರಗಳ ಮೇಲೆ ಭಾರತದ ವಾಯುಪಡೆ ಮಂಗಳವಾರ ವೈಮಾನಿಕ ದಾಳಿ ನಡೆಸಿದ ಬೆನ್ನಲೇ ವಾಯು ಪಡೆಯ ವಿಮಾನವೊಂದು ಪತನಗೊಂಡಿದೆ.

ಬುಧವಾರ ಬೆಳಗಿನ ಜಾವ ದೇಶ ಶಸಸ್ತ್ರ ಪಡೆಗಳು ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಜೈಷ್‌ ಸಂಘಟನೆಯ ಇಬ್ಬರು ಉಗ್ರರು ಬಲಿಯಾಗಿದ್ದಾರೆ.

ADVERTISEMENT

ಲೆಹ್‌, ಜಮ್ಮು, ಶ್ರೀನಗರ ಹಾಗೂ ಪಠಾಣ್‌ಕೋಟ್‌ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಕಮರ್ಷಿಯಲ್‌ ವಿಮಾನಗಳ ಹಾರಾಟಕ್ಕೆ ತಡೆ ನೀಡಲಾಗಿದ್ದು, ಈ ವಲಯಗಳಲ್ಲಿ ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.

ಇವನ್ನೂ ಓದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.