ಶ್ರೀನಗರ: ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೈಯಬಾ ಜೊತೆ ನಂಟು ಹೊಂದಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ.
ಬಂಧಿತರಿಂದ ಎರಡು ಚೀನಾ ಗ್ರೆನೇಡ್ ಮತ್ತು ಇತರ ಕಾನೂನುಬಾಹಿರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರನ್ನು ಅಬ್ರಾರ್ ಅಹ್ಮದ್ ವಾನಿ ಅಲಿಯಾಸ್ ಅಬು ಖಾದಿರ್, ಡ್ಯಾನಿಶ್ ಪರ್ವೇಜ್ ಎಂದು ಗುರುತಿಸಲಾಗಿದೆ. ಇಬ್ಬರೂ ಉತ್ತರ ಕಾಶ್ಮೀರ ಜಿಲ್ಲೆಯ ಸುಮ್ಲರ್ ಪ್ರದೇಶದ ನಿವಾಸಿಗಳು ಎಂದು ಪೊಲೀಸ್ ವಕ್ತಾರರು ಹೇಳಿದ್ದಾರೆ.
ಭಯೋತ್ಪಾದಕರ ಸಹಚರರ ಚಲನವಲನದ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಬಂಡಿಪೋರಾದ ಸುಮ್ಲರ್‌ನಲ್ಲಿ ಚೆಕ್ ಪಾಯಿಂಟ್ ಅನ್ನು ನಿರ್ಮಿಸಲಾಗಿತ್ತು. ಆ ಸ್ಥಳದಲ್ಲಿ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.