ಲಖೀಂಪುರ ಖೇರಿ (ಉತ್ತರ ಪ್ರದೇಶ): ಇಲ್ಲಿನ ನಿಘಾಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಸಮುದಾಯದ ಇಬ್ಬರು ಹದಿಹರೆಯದ ಸಹೋದರಿಯರ ಮೃತದೇಹಗಳು ಅವರ ಮನೆ ಸಮೀಪದ ಜಮೀನಿನ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರಪತ್ತೆಯಾಗಿದೆ.
ಪಕ್ಕದ ಗ್ರಾಮದ ಮೂವರು ಯುವಕರು ನನ್ನ ಮಕ್ಕಳನ್ನು ಅಪಹರಿಸಿ ಕೊಂದಿದ್ದಾರೆ’ ಎಂದು ಮೃತರ ತಾಯಿ ಆರೋಪಿಸಿದ್ದಾರೆ.
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.