ADVERTISEMENT

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ‍ಜಲಪಾತದಲ್ಲಿ ಕೊಚ್ಚಿ ಹೋದ ಮಹಿಳೆ

ಪಿಟಿಐ
Published 26 ಸೆಪ್ಟೆಂಬರ್ 2024, 13:20 IST
Last Updated 26 ಸೆಪ್ಟೆಂಬರ್ 2024, 13:20 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಅಲಿಭಾಗ್: ಕುಟುಂಬದವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಮಹಿಳೆಯೊ‌ಬ್ಬರು ಭಾರಿ ಮಳೆಯಿಂದಾಗಿ ಜಲಪಾತದಲ್ಲಿ ಕೊಚ್ಚಿ ಹೋದ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದ್ದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

ADVERTISEMENT

22 ವರ್ಷದ ಕ್ಷೀರಸಾಗರ ಎಂಬುವರೇ ಮೃತರು. ಮುಂಬೈನಿಂದ 70 ಕಿ.ಮೀ ದೂರದ ಖೊಪೋಲಿ ಪ್ರದೇಶದಲ್ಲಿರುವ ಝೆನಿತ್ ಜಲಪಾತದಲ್ಲಿ ಈ ಅವಘಢ ಸಂಭವಿಸಿದೆ.

ಖೊಪೋಲಿಯ ನಿವಾಸಿಗಳಾದ ಮಹಿಳೆ ಮತ್ತು ಆಕೆಯ ಕುಟುಂಬ ಸದಸ್ಯರು ಜಲಪಾತದ ಬುಡದಲ್ಲಿರುವ ನೀರಿನ ಕೊಳದಲ್ಲಿ ಇರುವಾಗ, ಭಾರಿ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾಗಿದೆ. ಈ ವೇಳೆ ಆಯತಪ್ಪಿ ಮಹಿಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರ ಕುಟುಂಬದ ನಾಲ್ವರು ಕೈಕೈ ಹಿಡಿದುಕೊಂಡು ದಡ ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಂತರ ಪೊಲೀಸರು ಸೇತುವೆಯ ಕೆಳಭಾಗದಲ್ಲಿ ಶವವನ್ನು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.